ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದು, ಬೆಂಗಳೂರು ಹಾಗೂ ನೆಲಮಂಗದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಒಟ್ಟು 20 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆಇದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದು, ಈ ವೇಳೆ 13 ಲಕ್ಷ ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಎರಡು ಕಡೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನಲ್ಲಿ 13 ಲಕ್ಷ ರೂ. ಹಾಗೂ ನೆಲಮಂಗದಲ್ಲಿ 7 ಲಕ್ಷ ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನ ಉದ್ಯಮಿ ರಘುಪತಿ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.