ಬಾಗಲಕೋಟೆ:ಶಿಕ್ಷಕಿಯರು ವಿದ್ಯಾರ್ಥಿನಿಯ ವಿರುದ್ಧ ಕಳ್ಳತನ ಆರೋಪ ಮಾಡಿ ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಅವಮಾನವಾಗಿ ವರ್ತಿಸಿದ್ದ ಸಲುವಾಗಿ ಇದರಿಂದ ಮನನೊಂದು ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ತಾಲೂಕಿನ ಕದಂಪುರ ಗ್ರಾಮದ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ಜಯಶ್ರೀ ಮಿಶ್ರೀಕೋಟಿ, ಮುಖ್ಯಶಿಕ್ಷಕ ಕೆ.ಹೆಚ್.ಮುಜಾವರ ಹಾಗೂ ಇತರೆ ಶಿಕ್ಷಕರು ಶಾಲೆಯಲ್ಲಿ 2 ಸಾವಿರ ರೂಪಾಯಿ ಕಳೆದುಹೋಗಿದೆ ಅಂಥ ಹೇಳಿ, 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ ಎನ್ನುವ ವಿದ್ಯಾರ್ಥಿನಿಯ ಬಳಿಯಲ್ಲಿ ಅಮಾನೀಯವಾಗಿ ವರ್ತನೆ ಮಾಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ವಿದ್ಯಾರ್ಥಿನಿಯ ಮೇಲೆ ಸಂಶಯ ಪಟ್ಟು ಶಿಕ್ಷಕಿಯರು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ನಡುವೆ ಇದರಿಂದ ಮನನೊಂದ ದಿವ್ಯಾ ಬಾರಕೇರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಸದ್ಯ ಪ್ರಕರಣ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.