ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಪರ ಆಡಲು ಸಜ್ಜಾಗಿದ್ದಾರೆ.
ಸುಮಾರು ಎರಡು ತಿಂಗಳ ಕಾಲ ಲಂಡನ್ನಲ್ಲಿ ಕಳೆದ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಭಾರತಕ್ಕೆ ಮರಳಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಮಗನಿಗೆ ಅಕಾಯಾ ಎಂದು ಹೆಸರಿಟ್ಟಿದ್ದಾರೆ.
THE GOAT VIRAT KOHLI IS BACK IN INDIA…!!!!!
– It's time for King Kohli show in IPL. 🐐 (Viral Bhayani). pic.twitter.com/ZoI07dAldd
— CricketMAN2 (@ImTanujSingh) March 17, 2024
ವಿರಾಟ್ ಕೊಹ್ಲಿ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ವಿರಾಮ ತೆಗೆದುಕೊಂಡಿದ್ದಾರೆ. ಎರಡನೇ ಮಗುವಿನ ಜನನದ ಕಾರಣ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಲಂಡನ್ನಲ್ಲಿದ್ದರು. ಫೆಬ್ರವರಿ ಎರಡನೇ ವಾರದಲ್ಲಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಬಗ್ಗೆ ಸ್ವತಃ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.