ಶಿವಮೊಗ್ಗ: ನಾನು ಚುನಾವಣೆಗೆ ಸ್ಪರ್ಧೆ ಮಾಡುವುದು ನಿಶ್ಚಿತ ಅಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪನವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.
ಇದೇ ವೇಳೆ ಅವರು ಮಾತನಾಡಿ, ನನಗೆ ಎಲ್ಲ ವರ್ಗದ ಜನತೆ ಕರೆ ಮಾಡಿ ನಾನು ಚುನಾವಣೆಗೆ ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ ಅಂಥ ಹೇಳಿದರು. ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಆರು ತಿಂಗಳು ಕಾಲದ ಬಳಿಕ ನೇಮಕ ಮಾಡಲಾಗಿದೆ. ಪಾರ್ಟಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಅಂಥ ಅವರು ಹಠ ಹಿಡಿದು ತಮ್ಮ ಮಗನನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಡಿದರು ಅಂಥ ಹೇಳಿದರು.