ಚಿಕ್ಕಬಳ್ಳಾಪುರ: 75 ವರ್ಷ ದಾಟಿದವರಿಗೆ ಲೋಕಸಭೆ ಚುನಾವಣೆ ಸ್ಪರ್ಧೆಗೆ ಟಿಕೆಟ್ ನೀಡುವುದಿಲ್ಲ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪ್ರಾಥಮಿಕ ಸದ್ಯಸತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಈಗ ನನಗೆ ಎಂಬತ್ತೊಂದು ವರ್ಷ ವಯಸ್ಸಾಗಿದೆ ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ ಅಂಥ ಈ ಹಿಂದೆ ಅವರು ಹೇಳಿದ್ದರು. ಚುನಾವಣಾ ರಾಜಕೀಯದಲ್ಲಿ ಇರದಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂದು ಬಿಜೆಪಿ ಸಂಸದರು ಈ ಹಿಂದೆ ಹೇಳಿದ್ದಾರೆ.