ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಬಂಡಾಯದ ಬಿಸಿ ತಟ್ಟಿದೆ. ಬಂಡಾಯ ಬಾವುಟ ಹಾರಿಸಿದ್ದ ಕೆ.ಎಸ್ ಈಶ್ವರಪ್ಪ ಅವರನ್ನು ತಣಿಸೋದಕ್ಕೆ ಬಿಜೆಪಿ ನಾಯಕರು ಮಾಡಿದಂತ ಸಂಧಾನ ಫಲಪ್ರದವಾಗಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕೆ.ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತವಾಗಿದೆ.
ನಾಳೆ ಶಿವಮೊಗ್ಗ ಜಿಲ್ಲೆಗೆ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಆಗಮನಿಸುತ್ತಿದ್ದಾರೆ. ಮೋದಿ ರೋಡ್ ಶೋ ಕೂಡ ನಡೆಸಲಿದ್ದಾರೆ. ಸುಮಾರು ಎರಡು ಲಕ್ಷ ಜನರು ಸೇರುವ ನಿರೀಕ್ಷೆ ಇದೆ.
ಇದೇ ಸಂದರ್ಭದಲ್ಲಿ ಬಂಡಾಯ ಬಾವುಟವನ್ನು ಹಾರಿಸಿದ್ದಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಇಳಿದಿದ್ದರು. ಆದರೆ ಯಾವುದೇ ನಾಯಕರ ಮಾತನ್ನು ಈಶ್ವರಪ್ಪ ಕೇಳಿಲ್ಲ ಎನ್ನಲಾಗಿದೆ. ಹೀಗಾಗಿ ನಾಳೆ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗದ ನಿರ್ಧಾರವನ್ನು ಕೈಗೊಂಡಿದ್ದಾರೆ.