ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಸಿದ್ಧತೆ ಮಾಡಿಕೊಂಡಿದ್ದು, ಬಿಜೆಪಿ ತನ್ನ ಮೊದಲ ಹಾಗೂ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮಾ.20ಕ್ಕೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮಧ್ಯ ನಾಳೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕೋರ್ ಕಮಿಟಿ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.
ಬಿಜೆಪಿಯಿಂದ ಜೋರು ಪ್ರಚಾರ, ಕಾಂಗ್ರೆಸ್ ನಾಯಕರು ಕಾಣೆಯಾಗಿದ್ದಾರೆ- ಆರ್.ಅಶೋಕ ವ್ಯಂಗ್ಯ
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸೋಮವಾರ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದೆ.ಜೆ.ಪಿ.ಭವನದಲ್ಲಿ ಬೆಳಗ್ಗೆ 11ಕ್ಕೆ ನಡೆಯಲಿರುವ ಸಭೆಯಲ್ಲಿ ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದೆ.ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಕಮಿಟಿ ಸದಸ್ಯರು ಭಾಗವಹಿಸಲಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ಕಾರ್ಯತಂತ್ರ, ಬಿಜೆಪಿ ಜತೆಗಿನ ಸಮನ್ವಯದ ಬಗ್ಗೆ ಚರ್ಚಿಸಲಾಗುತ್ತದೆ. ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದು, ಪಕ್ಷಕ್ಕೆ ದೊರೆತಿರುವ ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಇದನ್ನೇ ಬಿಜೆಪಿ ವರಿಷ್ಠರಿಗೆ ತಿಳಿಸಿದ್ದೇನೆ- ಕೆ.ಎಸ್ ಈಶ್ವರಪ್ಪ
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈಗಾಗಲೇ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಬ್ಬರಲ್ಲಿ ಒಬ್ಬರು ಸ್ಪರ್ಧಿಸುವಂತೆ ಪಕ್ಷದ ಸ್ಥಳೀಯ ಮುಖಂಡರು ನಿರಂತರ ಒತ್ತಾಯ ಮಾಡುತ್ತಿದ್ದಾರೆ.
ಈ ನಡುವೆ ಮಾಜಿ ಸಂಸದ ಸಿ.ಎಸ್.ಪುಟ್ಟರಾಜು ಅವರನ್ನು ಸ್ಪರ್ಧೆಗಿಳಿಸುವ ಬಗ್ಗೆ ಪಕ್ಷದ ವರಿಷ್ಠರಲ್ಲಿ ಚರ್ಚೆ ನಡೆದಿದೆ. ಕೋಲಾರ ಮೀಸಲು ಕ್ಷೇತ್ರದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಮಲ್ಲೇಶ್ ಬಾಬು ಅವರ ಹೆಸರುಗಳು ಮುಂಚೂಣಿಯಲ್ಲಿವೆ.