ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ನಿನ್ನೆಯಷ್ಟೇ ಲೋಕಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿತ್ತು. ಎರಡು ಹಂತಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ವಕೀಲ ಸಂಕೇತ್ ಏಣಗಿ ರಾಜೀನಾಮೆ ನೀಡಿದ್ದಾರೆ.
ಇಂದು ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವಂತ ಅವರು ತನಗೆ ಯಾವುದೇ ಹುದ್ದೆ ನೀಡದೇ ನಿರ್ಲಕ್ಷಿಸಿದ್ದಾರೆ. ಈ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷದಲ್ಲಿ ಉಸಿರು ಗಟ್ಟಿಸುವಂತ ಸ್ಥಿತಿ ಇದೆ ಎಂದರು.
ನಾನು ಸ್ವಾತಂತ್ರ್ಯ ಹೋರಾಟಗಾರರ ಮನೆತನದಿಂದ ಬಂದವನು ಆಗಿದ್ದೇನೆ. ನಾನು ಏಣಗಿ ಬಾಳಪ್ಪನವರ ಮೊಮ್ಮಗ ಆಗಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ನಾನು ಏನನ್ನೂ ಬಯಸಿಲ್ಲ. ಈ ಹಿನ್ನಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
‘ಕಾಂಗ್ರೆಸ್’ಗೆ ‘ಅಬ್ ಕಿ ಬಾರ್ 50 ಪಾರ್’ ಅಂತ ಹೇಳುವ ದೈರ್ಯ ಇದಿಯಾ.?: ಬೊಮ್ಮಾಯಿ ಸವಾಲು
‘ಚುನಾವಣಾ ಬಾಂಡ್’ ಅಂಕಿಅಂಶ ಬಹಿರಂಗ: ಯಾವ ಪಕ್ಷ? ಎಷ್ಟು ‘ದೇಣಿ’ಗೆ ಸ್ವೀಕಾರ? ಇಲ್ಲಿದೆ ಮಾಹಿತಿ | Electoral bonds