ದಾವಣಗೆರೆ : ರಂಜಾನ್ ಹಬ್ಬದ ಪ್ರಯುಕ್ತವಾಗಿ ಮಕ್ಕಳು ಈ ಸಂದರ್ಭದಲ್ಲಿ ಪಾನಿಪುರಿ ಸೇವಿಸಿ 19 ಮಕ್ಕಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಪಾನಿ ಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಬೆನ್ನೂರಿನ ಹಾಜರತ್ ಬಿಲಾಲ್ ಪುತ್ರ ಇರ್ಫಾನ್ (6) ಎನ್ನುವ ಬಾಲಕ ಸಾವನ್ನಪ್ಪಿದ್ದಾನೆ. ಮಾರ್ಚ್ 15 ರಂದು ಮಲೆಬೆನ್ನೂರಿನಲ್ಲಿ ಈ ಘಟನೆ ನಡೆದಿತ್ತು ಎಂದು ಹೇಳಲಾಗುತ್ತಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು.ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಮಕ್ಕಳು ಉಪವಾಸ ಇದ್ದರೂ ಎಂದು ಹೇಳಲಾಗುತ್ತಿದೆ. ಈ ವೇಳೆ ನಂತರ ಜಾಮಿಯಾ ಮಸೀದಿ ಬಳಿ ಮಕ್ಕಳು ಪಾನಿಪುರಿಯನ್ನು ಸೇವಿಸಿದ್ದರು.
ನಂತರ ವಾಂತಿ ಭೇದಿ ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು.ಈ ಬಗ್ಗೆ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಹರಿಹರ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇದೀಗ ಪೊಲೀಸರು ಘಟನೆ ಕುರಿತಂತೆ ತನಿಖೆ ಆರಂಭಿಸಿದ್ದಾರೆ.