ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಒಂದು ವಾರಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಒಂದು ವಾರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೀದರ್, ಕಲಬುರಗಿ, ವಿಜಯಪುರ, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಭಾನುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೀದರ್ ಜಿಲ್ಲೆಯ ಔರಾದ್ ಹಾಗೂ ಭಾಲ್ಕಿ ತಾಲೂಕಿನಲ್ಲಿ ಮಳೆಯಾಗಿದೆ.