ಬೆಂಗಳೂರು : 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ.
ರಾಜ್ಯದಲ್ಲಿ 2023-24ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೊಂದಾಯಿಸು ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಈ ಪ್ರಯುಕ್ತ ಗ್ರಾಮೀಣ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರು ಇನ್ನೂ ಹೆಚ್ಚಿನ ಸದಸ್ಯರನ್ನು ನೊಂದಾಯಿಸಿಕೊಳ್ಳಲು ಮಾರ್ಚ್ 31 ರವರೆಗೆ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.
ಈ ಸದಾವಕಾಶವನ್ನು ಎಲ್ಲಾ ಗ್ರಾಮಾಂತರ ರೈತ ಸಹಕಾರಿ ಸದಸ್ಯರು ಹಾಗೂ ನಗರ ಸಹಕಾರಿ ಸದಸ್ಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.