ನವದೆಹಲಿ: ಮಾರ್ಚ್ 20 ರವರೆಗೆ ಪೂರ್ವ, ಮಧ್ಯ ಮತ್ತು ಪಕ್ಕದ ಪರ್ಯಾಯ ದ್ವೀಪ ಭಾರತದಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಹವಾಮಾನವು ಬದಲಾಗಲಿದೆ, ಮಾರ್ಚ್ 20-23 ರಂದು ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಚದುರಿದ ಹಗುರದಿಂದ ಮಳೆ / ಹಿಮಪಾತದ ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 19 ರಂದು ಮತ್ತು ಮತ್ತೆ ಮಾರ್ಚ್ 21-23 ರ ನಡುವೆ ಮಳೆಯಾಗಲಿದೆ ಎನ್ನಲಾಗಿದೆ.
ಈ ನಡುವೆ ಮಾರ್ಚ್ 18 ರಂದು ಉತ್ತರ ಒಳನಾಡಿನ ಬೀದರ್, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಹಾಗೂ ಮಾರ್ಚ್ 21 ರಂದು ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಲ್ಲದೇ ಮಾರ್ಚ್ 20 ರಿಂದ 24 ರವವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ತಿಳಿಸಿದೆ.