ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಪಕ್ಷದಲ್ಲಿರುವ ಕುಟುಂಬ ರಾಜಕಾರಣವನ್ನು ವಿರೋಧಿಸಿದ್ದಾರೆ. ಆದರೆ ಅವರು ರಾಜ್ಯದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದ್ದಾರೆ. ಹೀಗಾಗಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗದ ಬೀಳಗಿ ಮಠಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಭೇಟಿ ನೀಡಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ ಇರುತ್ತದೆ ಎಂದು ಅವರು ತಿಳಿಸಿದರು.
ಸಿಟಿ ರವಿ ಬಸನಗೌಡ ಪಾಟೀಲ್ ಯತ್ನಾಳ್ ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ನೀಡಿಲ್ಲ.ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣವನ್ನು ಮೋದಿ ಅವರು ವಿರೋಧಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಯಡಿಯೂರಪ್ಪ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಹೀಗಾಗಿ ಪಕ್ಷೇತರ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಗೆದ್ದು ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇನೆ.ಕೇಂದ್ರದ ನಾಯಕರು ಕರೆ ಮಾಡಿದ್ದಾರೆ. ಅವರಿಗೂ ಕೂಡ ನನ್ನ ಸ್ಪಷ್ಟವಾದ ನಿರ್ಧಾರವನ್ನು ತಿಳಿಸಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಶಿವಮೊಗ್ಗದ ಬಿಳಿಗಿ ಮಟ್ಟದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.