ಬೆಳಗಾವಿ : ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಮಗು ಸಾವನನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿ ಎಂಬಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡದ ಲಕ್ಷ್ಮಿಹಳ್ಳಿ (28) ಎನ್ನುವ ಬಾಣಂತಿ ಹಾಗೂ ಮಗು ಕೂಡ ಸಾವನಪ್ಪಿದೆ ಎಂದು ತಿಳಿದುಬಂದಿದೆ.
ವಸತಿ ರಹಿತ ಬಡಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಮನೆ ಕಟ್ಟಲು ಸಿಗಲಿದೆ ಬಡ್ಡಿ ರಹಿತ ಸಾಲ!
ನಿನ್ನೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಣಂತಿಯನ್ನು ದಾಖಲಿಸಿದ್ದರು.ಬೆಳಿಗ್ಗೆ ಕಿಣೆ ಆಸ್ಪತ್ರೆಯಲ್ಲಿ ಲಕ್ಷ್ಮಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ಲಕ್ಷ್ಮಿಗೆ ತೀವ್ರವಾಗಿ ರಕ್ತಸ್ರಾವ ಆಗಿದೆ ತಕ್ಷಣ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಎಂದು ತಿಳಿಸಿದ್ದಾರೆ.
BREAKING: ಮಾರ್ಚ್ 21ರೊಳಗೆ ಚುನಾವಣಾ ಬಾಂಡ್ಗಳ ಎಲ್ಲ ಮಾಹಿತಿ ಬಹಿರಂಗಪಡಿಸುವಂತೆ SBI ಗೆ ಸುಪ್ರೀಂ ಸೂಚನೆ
ಆದರೆ ಬಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ತಾಯಿ ಹಾಗೂ ಮಗು ಸಾವನ್ನಪ್ಪಿದ್ದರೆ. ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿ ಆದರೂ ವೈದ್ಯರು ಚಿಕಿತ್ಸೆ ನೀಡಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ವ್ಯವಸ್ಥೆ ಮಾಡದೆ ಬೇಜವಾಬ್ದಾರಿ ತೋರಿದ್ದಾರೆ ಎಂದು ಆರೋಪಿಸಲಾಗುತ್ತಿದೆ.ವೈದ್ಯರ ನಿರ್ಲಕ್ಷದಿಂದ ಬಾಣಂತಿ ಮಗು ಸಾವು ಎಂದು ಆರೋಪ ಕೇಳಿ ಬರುತ್ತಿದೆ.ಇದೀಗ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯ ಪಡಿಸುತ್ತಿದ್ದಾರೆ ಬೆಳಗಾವಿ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡಗು : ಅಡ್ಡಾದಿಡ್ಡಿ ಕಾರು ಚಲಾಯಿಸಿ ಮಹಿಳೆಯರಿಗೆ ಡಿಕ್ಕಿ ಹೊಡೆದ ‘ಅಪ್ರಾಪ್ತ’ ಬಾಲಕ : ಇಬ್ಬರಿಗೆ ಗಾಯ