ಬೆಂಗಳೂರು : ಇ ಇ ಡಿ ಎಸ್ ತಂತ್ರಾಂಶದಲ್ಲಿ ಶಿಕ್ಷಕರ ಸೇವಾವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಬಟವಾಡೆ ಅಧಿಕಾರಿಗಳಾದ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು ಹಾಗೂ ಎಲ್ಲಾ ಕಛೇರಿ ಮುಖ್ಯಸ್ಥರುಗಳಿಗೆ ಈ ಮೂಲಕ ಸೂಚಿಸುವುದೇನೆಂದರೆ ಕ್ರಿ ಶ 2023-24 ನೇ ಸಾಲಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕಾರ್ಯನಿರ್ವಹಿಸುತ್ತಿರುವವರ ವಲಯ ಬದಲಾವಣೆ ವರ್ಗಾವಣೆ ಮತ್ತು ಕೋರಿಕೆ ವರ್ಗಾವಣೆಗಳನ್ನು ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಯಂತೆ ಹಮ್ಮಿಕೊಳ್ಳಲಾಗುತ್ತಿದೆ.ಈ ಬಗ್ಗೆ ವೇಳಾಪಟ್ಟಿ ಪ್ರಕಟಿಸಲಾಗುತ್ತಿದೆ. ಸದರಿ ವರ್ಗಾವಣೆ ಪ್ರಕ್ರಿಯೆಯು ಸಂಪೂರ್ಣವಾಗಿ ಇಇಡಿಎಸ್ ತಂತ್ರಾಂಶದಲ್ಲಿನ ಶಿಕ್ಷಕರ ಸೇವಾವಿವರಗಳನ್ನು ಆಧರಿಸಿಯೇ ಮುಕ್ತ ಮತ್ತು ಪಾರದರ್ಶಕತೆಯಿಂದ ನಡೆಯುತ್ತದೆ.
ಈ ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಎಲ್ಲಾ ಬಟವಾಡೆ ಅಧಿಕಾರಿಗಳು ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಇತ್ತೀಚಿನ ಬದಲಾದ ಸೇವಾ ವಿವರಗಳನ್ನು ಅವರ ಸೇವಾ ವಹಿಯಂತ ಪರಿಶೀಲಿಸಿ ಇ ಇ ಡಿ ಎಸ್ ತಂತ್ರಾಂಶದಲ್ಲಿ ಅಪ್‌ಡೇಟ್ ಮಾಡಿ ಅಂತಿಮಗೊಳಿಸಬೇಕಾದ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸೇವಾ ವಿವರಗಳನ್ನು ಅವರ ಸೇವಾ ವಹಿಯಂತೆ ಮತ್ತೊಮ್ಮೆ ಪರಿಶೀಲಿಸಿ ಈ ಕೆಳಕಂಡ ಅಂಶಗಳನ್ನೊಳಗೊಂಡಂತೆ ನಿಖರವಾದ ಸೇವಾ ವಿವರಗಳನ್ನು ಇಇಡಿಎಸ್ ತಂತ್ರಾಂಶದಲ್ಲಿ ಅಪ್‌ಡೇಟ್ ಮಾಡಿ ಅಂತಿಮಗೊಳಿಸುವ ಬಗ್ಗೆ ಅಯಾ ಬಟವಾಡೆ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚಿಸಲಾಗಿದೆ.