ಬೆಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿ ಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು.
ತಾಯಂದಿರು, ಸಹೋದರಿಯರಿಗಾಗಿ ಜೀವನವನ್ನೇ ತ್ಯಾಗ ಮಾಡುತ್ತೇನೆ: ರಾಹುಲ್ ಗಾಂಧಿ ‘ಶಕ್ತಿ’ ಹೇಳಿಕೆಗೆ ಮೋದಿ ತಿರುಗೇಟು
ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ ಎಂದು ಸಮರ್ಥಿಸಿಕೊಂಡರು.
ಬೆಂಗಳೂರು : ‘ನಕಲಿ’ ವಜ್ರವನ್ನು ಕಡಿಮೆ ಬೆಲೆಗೆ ಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ನಾಲ್ವರ ಬಂಧನ
ಚುನಾವಣಾ ಬಾಂಡ್ ವಿಷಯ ಇಷ್ಟಕ್ಕೇ ನಿಲ್ಲುವುದಿಲ್ಲ. ಇದರ ಆಳ ಬಹಳ ಇದೆ. ಇದು ಇನ್ನೂ ಮುಂದುವರಿಯಲಿದೆ. ಚುನಾವಣಾ ಬಾಂಡ್ಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳನ್ನೂ ತನಿಖೆಗೆ ಒಳಪಡಿಸಲಿ. ಚುನಾವಣಾ ಬಾಂಡ್ ವ್ಯವಸ್ಥೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸಾಧ್ಯ ಎಂದು ಭಾವಿಸಲಾಗಿತ್ತು. ಆದರೆ, ಇದರ ದುರುಪಯೋಗವೇ ಜಾಸ್ತಿಯಾಗಿದೆ ಎಂದು ಹೇಳಿದರು.
ಮಹಿಳೆಯರ ಸಬಲೀಕರಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮೋದಿಯವರು ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ. ಹೆಚ್ಚಿನ ಸಂದರ್ಭಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಳಿಗೆ ಒಳಗಾದ ನಂತರ ಅಥವಾ ಗುತ್ತಿಗೆಗಳನ್ನು ಪಡೆದ ನಂತರ ಬಿಜೆಪಿ ಹೆಸರಲ್ಲಿ ಚುನಾವಣಾ ಬಾಂಡ್ ತೆಗೆದುಕೊಂಡಿರುವುದು ಬಹಿರಂಗಗೊಂಡಿದೆ. ಇದರಿಂದಾಗಿ, ಭ್ರಷ್ಟಾಚಾರ, ನೈತಿಕತೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದ ಮೋದಿ ಅವರ ನಿಜವಾದ ಬಣ್ಣ ಏನು ಎಂಬುದು ಗೊತ್ತಾಗಿದೆ ಎಂದು ಟೀಕಿಸಿದರು.