ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಗಣಗಳು ಸಂಭವಿಸುತ್ತದೆ ಎಷ್ಟೇ ಮುಂಜಾಗ್ರತಾ ಕ್ರಮ ವಹಿಸಿದರು ಕೂಡ ಈ ರೀತಿ ಅಗ್ನಿ ದುರಂತಗಳು ಸಂಭವಿಸುತ್ತಲೇ ಇವೆ. ಇದೀಗ ಇಂಡಸ್ ಕಂಪನಿಯ ಮೊಬೈಲ್ ನೆಟ್ವರ್ಕ್ ಟವರ್ ಬೆಂಕಿಗಾಹುತಿ ಆಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ.
ಜನರೇಟರ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಇಡೀ ಟವರ್ಗೆ ಬೆಂಕಿ ವ್ಯಾಪಿಸಿತ್ತು. ಜನರೇಟರ್ಗೆ ತುಂಬಿಸಿದ್ದ ಡಿಸೇಲ್ಗೆ ಬೆಂಕಿ ತಗುಲಿ ಟವರ್ ಹೊತ್ತಿ ಉರಿದಿತ್ತು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವುದಾಗಿ ಶಂಕಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ವಾಹನದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಜಿಗಣಿ ಪೊಲೀಸ್ ಠಾಣೆ ಸಿಬ್ಬಂದಿಗಳು ದೌಡಾಯಿಸಿದ್ದಾರೆ.
ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಭಸ್ಮವಾಗಿರುವ ಘಟನೆ ನಡೆದಿದೆ.ಬೆಂಗಳೂರಿನ ಭೈರತಿ ಉಗ್ರಾಣದ ಬಳಿಯ ಗಾಯಿತ್ರಿ ಅಸೋಸಿಯೇಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.ಈ ಘಟನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.ಘಟನೆ ಸಂಬಂಧ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿವೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.