ಬೆಂಗಳೂರು: ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸ್ ಹಾಕಿದ್ದಕ್ಕೇ ಹಲ್ಲೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಘಟನೆ ನಡೆದಿತ್ತು. ಆದ್ರೇ ಈ ಘಟನೆಯ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ದಾಖಲೆ ಸಹಿತ ಕೆಲ ಸ್ಪಷ್ಟನೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ.
ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. ಲಭ್ಯವಾದ ಎಫ್ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರವಲ್ಲ, ಆರು ಆರೋಪಿಗಳಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಹೆಸರಿನ ಆರೋಪಿಗಳಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ.
ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ.
ಲಭ್ಯವಾದ ಎಫ್ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ.
ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ… pic.twitter.com/15s9AKCPhv
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 18, 2024
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು
‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ವಾರ್ಷಿಕ ಪರೀಕ್ಷೆಯಂದು KSRTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ