ಗಜೇಂದ್ರಗಡ : ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರು ತಿಂಗಳಲ್ಲಿ ಕಾಂಗ್ರೆಸ್ ವಿಭಜನೆ ಆಗಲಿದೆ ಎಂದು ಮಾಜಿ ಸಿಎಂ ಬಸರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಅವರು ಮತ್ತೆ ಪ್ರಧಾನಿಯಾಗಿ ಮೂರು ತಿಂಗಳ ಬಳಿಕ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ವಿಭಜನೆ ಆಗಲಿದೆ. ನಾನು ಸಂಸದನಾಗಿ ರೋಣಕ್ಕೆ ಬರುವುದು ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಎಂದು ತಿಳಿಸಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ-ಗದಗ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಈಗಾಗಲೇ ಪ್ರಚಾರದಲ್ಲಿ ತೊಡಗಿದ್ದಾರೆ.