ಬೆಂಗಳೂರು : ಬೇಡಿಕೆ ಇಳಿಕೆಯಾದ ಕಾರಣ ಎಮ್ಮೆ ಹಾಲು ಮಾರಾಟ ಸ್ಥಗಿತಕ್ಕೆ ಕರ್ನಾಟಕ ಹಾಲು ಮಹಾ ಮಂಡಳಿ ಚಿಂತನೆ ನಡೆಸಿದೆ.
ಕೆಲ ತಿಂಗಳ ಹಿಂದಟೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದ ಎಮ್ಮೆ ಹಾಲಿಗೆ ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಮಾರಾಟವನ್ನು ಸ್ಥಗಿತಗೊಳಿಸುವ ಸಂಬಂಧ ಕೆಎಂಎಫ್ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಎಮ್ಮೆ ಹಾಲಿಗೆ ಬೇಡಿಕೆ ಕಡಿಮೆಯಾಗಿದ್ದು, ಪ್ರತಿದಿನ ಕೇವಲ ಎರಡು ಸಾವಿರ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಇದರಿಂದ ಸಂಸ್ಥೆಗೆ ಲಾಭಕ್ಕಿಂತ ನಷ್ಟವಾಗುತ್ತಿದ್ದು, ಹೀಗಾಗಿ ಎಮ್ಮೆ ಹಾಲಿನ ಮಾರಾಟ ಸ್ಥಗಿತಗೊಳಿಸಲು ಕೆಎಂಎಫ್ ನಿರ್ಧರಿಸಿದೆ ಎನ್ನಲಾಗಿದೆ.