ಬೆಂಗಳೂರು : ಬೆಂಗಳೂರಿನ ಮೇಘನಾ ಫುಡ್ ಗ್ರೂಪ್ ಕಂಪನಿ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೇಘನಾ ಪುಡ್ಸ್ ಗ್ರೂಪ್ ಕಂಪನಿ ಮೇಲೆ ಬೆಳ್ಳಂಬೆಳಗ್ಗೆ ಬೆಂಗಳೂರಿನ ೧೦ ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೇಘನಾ ಪುಡ್ಸ್ ಹೆಸರಿನ ಹೋಟೆಲ್ ರೆಸ್ಟೋರೆಂಟ್ ಹೊಂದಿರುವ ಕಂಪನಿ ಮೇಲೆ ಆದಾಯ ತೆರಿಗೆ ಪಾವತಿ ವ್ಯತ್ಯಾಸ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದ್ದು, ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.