ಬೆಂಗಳೂರು: ಮಿಸ್ಟರ್ ಡಿ.ಕೆ.ಶಿವಕುಮಾರ್, ಇವತ್ತು ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ನೀವು. ನಿಮ್ಮಿಂದಲೇ ಈ ಮೈತ್ರಿ ಆಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಹೊಂದಾಣಿಕೆ ಮಾಡಿಕೊಳ್ಳೊದಕ್ಕೆ ಮೂಲ ಕಾರಣವೂ ನೀವೇ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹಿಂದೆ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರಕಾರ ರಚನೆ ಆದಾಗ ಈ ಸರಕಾರ ಐದು ವರ್ಷ ಇರಬೇಕು ಎಂದು ಹೇಳಿದ್ದಿರಿ. ಆದರೆ ಪಕ್ಕದಲ್ಲೇ ಕೂತು ಬಿಲ ಕೊರೆದಿರಿ. ಅಧಿಕಾರವನ್ನೂ, ಆ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷವನ್ನೇ ರಾಮನಗರದಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಿರಿ. ಆಗ ಮಂಡ್ಯದಲ್ಲಿ ದೋಖಾ ಮಾಡಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲುವಂತೆ ಮಾಡಿದಿರಿ. ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಮ್ಮ ಕಾರ್ಯಕರ್ತರು ಇದನ್ನೇ ಮಾಡಿದ್ದಿದ್ದರೆ ಆತನೂ ಮನೆಯಲ್ಲಿ ಕೂರಬೇಕಿತ್ತು. ಮೈತ್ರಿಗೆ ನಾವು ಮೋಸ ಮಾಡಲಿಲ್ಲ ಎಂದರು.
ಬಿಜೆಪಿ ಜತೆ 20 ತಿಂಗಳು ಸರಕಾರ ಮಾಡಿದ್ದರಿಂದ ನಾನು ಪಕ್ಷವನ್ನು ಉಳಿಸಿಕೊಂಡಿದ್ದೇನೆ. ಆದರೆ ನಿಮ್ಮ ಜತೆ 14 ತಿಂಗಳ ಮೈತ್ರಿಯಲ್ಲಿ ನಾವು ಸಾಕಷ್ಟು ಕಳೆದುಕೊಂಡಿದ್ದೇನೆ. ರಾಜಕೀಯವಾಗಿ ನೀವು ವಿಷ ಹಾಕಿ ನಮ್ಮನ್ನು ಕೊಂದಿದ್ದೀರಾ. ಹಂತ ಹಂತವಾಗಿ ನಮ್ಮನ್ನು ಕುಗ್ಗಿಸಿದ್ದೀರಾ. 14 ತಿಂಗಳು ನಿಮ್ಮ ಜತೆ ಸರಕಾರ ಮಾಡಿದ್ದು ನಾನು ತೆಗೆದುಕೊಂಡ ಅತ್ಯಂತ ಕೆಟ್ಟ ನಿರ್ಧಾರ. ದೇವೇಗೌಡರ 60 ವರ್ಷಗಳ ಸುಧೀರ್ಘ ರಾಜಕಾರಣಕ್ಕೆ ಕೊಳ್ಳಿ ಇಟ್ಟಿದ್ದೀರಾ. ನನ್ನ ಜತೆ ಇದ್ದವರನ್ನು ಖರೀದಿ ಮಾಡುತ್ತಿದ್ದೀರಾ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ವಿರುದ್ಧ ಕಿಡಿಕಾರಿದರು.
ಬಿಜೆಪಿಯಲ್ಲಿ ನನಗೆ ಗೌರವ ಕೊಟ್ಟಿದ್ದಾರೆ. ಅವರು ನಿಮ್ಮ ಹಾಗೆ ನನ್ನ ಕುತ್ತಿಗೆ ಕೋಯ್ದಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ತೋಳ್ಬಲ, ಧನಬಲ, ಅಧಿಕಾರ ಬಲದಿಂದ ಮೆರೆಯಿತ್ತಿದ್ದೀರಿ. ನನ್ನ ಪಕ್ಷದ ಶಾಸಕರನ್ನು ಸೆಳೆಯೋದಕ್ಕೆ ನೀವು ಏನೆಲ್ಲ ಮಾಡಿದ್ದಿರಿ ಎನ್ನುವುದು ಗೊತ್ತಿದೆ ನನಗೆ. ಇವತ್ತಿಗೂ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದೀರಿ. ನೀವು ನಮ್ಮನ್ನು ಮುಗಿಸಲು ಹಂತ ಹಂತವಾಗಿ ಏನೆಲ್ಲಾ ಮಾಡುತ್ತಿದ್ದೀರಾ ಎನ್ನುವ ಮಾಹಿತಿ ನನಗೆ ಇದೆ. ಜನರೇ ನಿಮಗೆ ತಕ್ಕ ಶಾಸ್ತಿ ಮಾಡುವ ದಿನಗಳು ಹತ್ತಿರಕ್ಕೆ ಬಂದಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್ ಡಿ.ಕೆ.ಶಿವಕುಮಾರ್- HDK ವಾಗ್ದಾಳಿ
‘ಕಾಂಗ್ರೆಸ್ ಅಭ್ಯರ್ಥಿ’ಯಿಂದ ಚುನಾವಣಾ ಅಕ್ರಮ: ‘ಕುಕ್ಕರ್, ಹಣ ಹಂಚಿಕೆ’ ದಾಖಲೆ ಬಿಡುಗಡೆ ಮಾಡಿದ ‘HDK’