ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೇಲಿಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಹಾಗೂ ತಾಯಿ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಈ ದುರಂತ ನಡೆದಿದ್ದು, ಮಲ್ಲಸಮುದ್ರ ಗ್ರಾಮದ ತಲಾರಿ ಮಾರಕ್ಕ (24) ಮಕ್ಕಳಾದ ನಯನ (4) ಹರ್ವಧನ (2) ಮೃತಪಟ್ಟಿದ್ದಾರೆ.
ಮನೆಯ ಪಕ್ಕದ ಕಣದ ಬೇಲಿಗೆ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲೇ ಮಾರಕ್ಕ ತನ್ನ ಇಬ್ಬರು ಮಕ್ಕಳನ್ನು ಬೆಂಕಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.