ಬೆಂಗಳೂರು : ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಾಲಾ ಶಿಕ್ಷಕರು ಹಾಗೂ ಪಿಯುಸಿ ಉಪನ್ಯಾಸಕರಿಗೆ ಲೋಕಸಭೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯಾದ್ಯಂತ ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆ ನಂತರ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಅರಂಭವಾಗಲಿವೆ. ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಹಾಗೂ ಪಿಯುಸಿ ಉಪನ್ಯಾಸಕರಿಗೆ ಲೋಕಸಭಾ ಚುನಾವಣೆ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ಪತ್ರ ಬರೆಯಲಾಗಿದೆ.
ಇನ್ನು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಮೌಲ್ಯಮಾಪನ ಕಾರ್ಯದ ಜೊತೆಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ 2 ಮತ್ತು 3 ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ಕೋರಲಾಗಿದೆ.