ಕಾಬೂಲ್ : ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಬುಧವಾರ ಮುಂಜಾನೆ 2:57 ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ತಮ್ಮ ಮನೆಗಳಲ್ಲಿ ಮಲಗಿದ್ದ ಜನರು ಇದ್ದಕ್ಕಿದ್ದಂತೆ ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಇದಕ್ಕೂ ಮೊದಲು ಮಾರ್ಚ್ 19 ರಂದು ಸಂಜೆ 7:30 ಕ್ಕೆ ಅಫ್ಘಾನಿಸ್ತಾನದಲ್ಲಿ 4.0 ರಿಯಾಕ್ಟರ್ ಭೂಕಂಪ ಸಂಭವಿಸಿತ್ತು. ಇದಕ್ಕೂ ಮೊದಲು ಬೆಳಿಗ್ಗೆ 06:05 ಕ್ಕೆ ಕಾಬೂಲ್ನಲ್ಲಿ ಭೂಕಂಪನ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ಅಫ್ಘಾನಿಸ್ತಾನದಲ್ಲಿ ಮೂರು ಭೂಕಂಪಗಳು ಸಂಭವಿಸಿವೆ.
ಪಾಕಿಸ್ತಾನದಲ್ಲಿ ಬುಧವಾರ ಮುಂಜಾನೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ.