ಬೆಂಗಳೂರು : ಪ್ರೀತಿ ವಿಚಾರಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೇರಳ ಮೂಲದ ಸೋನು ಕುಮಾರ್ (19) ಎನ್ನುವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದ್ದು, ಸನ್ ಫ್ಲವರ್ ಕಾಲೇಜು ಆಫ್ ನರ್ಸಿಂಗ್ ವಿದ್ಯಾರ್ಥಿ ಎಂದು ಹೇಳಲಾಗುತ್ತಿದೆ. ಪ್ರೀತಿಯಲ್ಲಿ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮನೆ ಬಳಿ ಸ್ನೇಹಿತರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ-ಬೈಕ್ ನಡುವೆ ಅಪಘಾತ-ಮಹಿಳೆ ಸಾವು
ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಪತ್ನಿ ಸಾವನ್ನಪ್ಪಿದ್ದು, ಪತಿಗೆ ಗಂಭೀರವಾದ ಗಾಯವಾಗಿರುವ ಘಟನೆ ನೆಲಮಂಗಲ ತಾಲೂಕಿನ ಸುಂಕದಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ.ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಈ ಘಟನೆ ನಡೆದಿದೆ.ಸಂಕಲ್ಪಟ್ಟಿಯ ನೀಲಮ್ಮ ಎನ್ನುವ ಮಹಿಳೆ ಸಾವನಪ್ಪಿದ್ದು ಪತಿ ಬಸವರಾಜುಗೆ ಗಂಭೀರವಾದಂತಹ ಗಾಯಗಳಾಗಿದೆ.
ನಂತರ ದಾಬಸಪೇಟೆ ಆಸ್ಪತ್ರೆಯಲ್ಲಿ ಪತಿ ಬಸವರಾಜು ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ ಚಾಲಕನ ಅತಿ ವೇಗದ ಚಾಲನೆ ಹಾಗೂ ನಿರ್ಲಕ್ಷದಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲಿ ಬಿಟ್ಟು ಪರಾರಿ ಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.