ಕೊಪ್ಪಳ : ತಮ್ಮ ಮಗನಿಗೆ ಲೋಕಸಭಾ ಟಿಕೆಟ್ ಸಿಕ್ಕಿಲ್ಲವೆಂದು ಈಗಾಗಲೇ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯವೇದಿದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದೀಗ ಬಿಜೆಪಿ ಮತ್ತೊಬ್ಬ ನಾಯಕ ಬಂಡಾಯವೇದಿದ್ದು ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಶೀಘ್ರದಲ್ಲೇ ‘ಫಾಸ್ಟ್ಟ್ಯಾಗ್’ ಬದಲು ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ :ವಿವರ ಇಲ್ಲಿದೆ
ಹೌದು ಕೆಎಸ್ ಈಶ್ವರಪ್ಪ ಬಳಿಕ ಮತ್ತೊಬ್ಬ ಬಿಜೆಪಿ ನಾಯಕ ಬಂಡಾಯವೆದ್ದಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
`IVF’ ವಿಧಾನದ ಮೂಲಕ ಗರ್ಭ ಧರಿಸಲು ವಯಸ್ಸಿನ ಮಿತಿ ನಿಗದಿಪಡಿಸಿದ ಸರ್ಕಾರ!
ಇದೆ ವಿಚಾರವಾಗಿ ನಾಳೆ ಕಾರ್ಯಕರ್ತರು ಹಾಗೂ ಬೆಂಬಲಿಗರ ಜೊತೆಗೆ ಸಂಗಣ್ಣ ಕರಡಿ ಸಭೆಯನ್ನು ಕರೆದಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.