ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ನೀತಿ ಸಂಹಿತೆಯಿದ್ದರೂ, ಪ್ರಚೋದನಕಾರಿ ಹೇಳಿಕೆಯನ್ನು ನೀಡುವ ಮೂಲಕ, ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಜನಾಂದೋಲನ ಸಂಘಟನೆಯಿಂದ ದೂರು ನೀಡಲಾಗಿದೆ.
ಇಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯಾಗಿರುವಂತ ತುಷಾರ್ ಗಿರಿನಾಥ್ ಅವರನ್ನು ಭೇಟಿಯಾದಂತ ಜನಾಂದೋಲನ ಸಂಘಟನೆಯ ಮುಖಂಡರು, ಸಂಸದ ತೇಜಸ್ವಿ ಸೂರ್ಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಚುನಾವಣಾ ನೀತಿ ಸಂಹಿತೆ ಇದ್ದರೂ ಬೆಂಗಳೂರಿನ ನಗರತ್ ಪೇಟೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದ್ದಾರೆ. ಇದು ಪ್ರಚೋದನಕಾರಿ ಹೇಳಿಕೆಯಾಗಿದೆ. ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜನಾಂದೋಲ ಸಂಘಟನೆಯು ಚುನಾವಣಾಧಿಕಾರಿಗೆ ನೀಡಿದಂತ ದೂರಿನಲ್ಲಿ ಒತ್ತಾಯಿಸಿದ್ದಾರೆ.
`EVM’ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾರದರ್ಶಕತೆಗೆ ಸಾಕ್ಷಿಯಾಗಿದೆ : ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ನಾನು ಗೆಲ್ಲೋದು ಖಚಿತ, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟದಿಂದ ಕೆಳಗೆ ಇಳಿಯೋದು ನಿಶ್ಚಿತ- ಕೆ.ಎಸ್ ಈಶ್ವರಪ್ಪ