ವಿಜಯಪುರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ನಂತ್ರ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮ ಕೈಗೊಳ್ಳಲಾಗಿದೆ. ಇಂದು ಚುನಾವಣಾಧಿಕಾರಿಗಳು ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 4.5 ಲಕ್ಷ ಹಣ ಜಪ್ತಿ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೊಳಖೇಡ ಬಳಿಯಲ್ಲಿ ಚುನಾವಣಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಕಾರೊಂದರಲ್ಲಿ 4.5 ಲಕ್ಷ ಹಣ ಪತ್ತೆಯಾಗಿದೆ. ಈ ಹಣದ ಬಗ್ಗೆ ಕಾರಿನಲ್ಲಿದ್ದಂತ ಚಾಲಕ ರೋಷನ್ ಗಜಾನನ್ ಎಂಬುವರನ್ನು ಪ್ರಶ್ನಿಸಿದಾಗ ಸರಿಯಾದ ಮಾಹಿತಿ ನೀಡಿಲ್ಲ.
ಈ ಹಿನ್ನಲೆಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 4.5 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಹಣವನ್ನು ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಔರಂಗಾಬಾದ್ ಮೂಲದ ರೋಷನ್ ಗಜಾನನ್ ಎಂಬಾತನನ್ನು ವಶಕ್ಕೆ ಪಡೆದಿರುವಂತ ಝಳಕಿ ಠಾಣೆಯ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ನಾನು ‘ಅಂಗನವಾಡಿ ಕಾರ್ಯಕರ್ತೆ’ಯರ ಸಭೆ ನಡೆಸಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಸಾರ್ವಜನಿಕರೇ ಎಚ್ಚರ.! ‘ನೀತಿ ಸಂಹಿತೆ’ ವೇಳೆ ಈ ಎಲ್ಲವೂ ನಿಷೇಧ, ಉಲ್ಲಂಘಿಸಿದ್ರೆ ‘ಕೇಸ್ ಫಿಕ್ಸ್’