ಚೈನ್ನೈ : ಹೃದಯಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಅವರಿಗೆ ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.
ಎಚ್ ಡಿ ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಸತತ ಎರಡು ಗಂಟೆಗಳ ಕಾಲವರೆಗೆ ನಡೆದ ಹಾರ್ಟ್ ಆಪರೇಷನ್ ಇದಿಗ ಯಶಸ್ವಿಯಾಗಿದೆ. ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಎಚ್ ಡಿ ಕುಮಾರಸ್ವಾಮಿಗೆ ಹಾರ್ಟ್ ಆಪರೇಷನ್ ನಡೆಯಿತು.ಮೂರನೇ ಬಾರಿ ಹೆಚ್ಡಿ ಕುಮಾರಸ್ವಾಮಿ ಹೃದಯದ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ಇತ್ತೀಚಿಗೆ ದಾಖಲಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿ ಅವರಿಗೆ ಇಂದು ಶಸ್ತ್ರ ಚಿಕಿತ್ಸೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಯಿತು ಎಂದು ತಿಳಿದುಬಂದಿದೆ.ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೀಗ ಶಸ್ತ್ರಚಿಕಿತ್ಸೆ ಬಳಿಕ 2-3 ದಿನ ವಿಶ್ರಾಂತಿ ಪಡೆಯುವ ಕುಮಾರಸ್ವಾಮಿ ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.