ಬೆಂಗಳೂರು: “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂದು ಕೇಳಿದಾಗ “ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು” ಎಂದರು.
“ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು (ಗುರುವಾರ) ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ” ಎಂದರು.
ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಉಂಟಾಗಿದೆ ಎಂದಾಗ “ನಾಲ್ಕು ಕ್ಷೇತ್ರಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.
‘ಮೇಕೆದಾಟು’ ಕಟ್ಟಲೆಂದೇ ‘ಜಲ ಸಂಪನ್ಮೂಲ ಸಚಿವ’ನಾಗಿದ್ದೇನೆ- ಡಿಸಿಎಂ ಡಿ.ಕೆ ಶಿವಕುಮಾರ್
Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 `ಭೂಮಾಪಕರ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ