ಬೆಂಗಳೂರು: ನಾಗರತ್ ಪೇಟೆ ಘಟನೆಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್ ಸೇರಿದಂತೆ 44 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಸೆಕ್ಷನ್ 143, 149, 188, 283, 290 ಮತ್ತು 268 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಭಕ್ತಿಗೀತೆಗಳನ್ನು ನುಡಿಸಿದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಐದಕ್ಕೂ ಹೆಚ್ಚು ಜನರು ಥಳಿಸಿದ ನಂತರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಹಲವಾರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತಾಗಿ ಎಲ್ಲಿಯೂ ಪ್ರತಿಭಟನೆ ನಡೆಸೋದಕ್ಕೆ ಅವಕಾಶವಿಲ್ಲ. ಹೈಕೋರ್ಟ್ ಖಡಕ್ ಆದೇಶ ಮಾಡಿದೆ. ಹೀಗಿದ್ದೂ ಪ್ರತಿಭಟನೆ ನಡೆಸಿದ್ದಾರೆ ಎಂಬುದಾಗಿ ಹಲಸೂರು ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ 44 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮೊಬೈಲ್ ಅಂಗಡಿಯ ಮಾಲೀಕ ಮುಖೇಶ್ ಮತ್ತು ಅವರ ಅಂಗಡಿಯ ಬಳಿ ನಮಾಜ್ ಸಮಯದಲ್ಲಿ ಹನುಮಾನ್ ಚಾಲೀಸಾ ನುಡಿಸುವುದನ್ನು ಆಕ್ಷೇಪಿಸಿದ ಅನ್ಯಕೋಮಿನ ಯುವಕರು, ನಂತ್ರ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಹಲಸೂರು ಗೇಟ್ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಆದರಿಸಿ ಆರೋಪಿಗಳನ್ನು ಬಂಧಿಸಿದ್ದರು.
Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 `ಭೂಮಾಪಕರ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
BREAKING :ಶಿವಮೊಗ್ಗ: ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದ 1.1 ಕೋಟಿ ಮೌಲ್ಯದ ಬಟ್ಟೆಗಳು ವಶ