ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಸ್ವಲ್ಪ ಸಮಯದ ನಂತ್ರದ ಅವ್ರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎನ್ನಲಾಗಿತ್ತು. ಈ ನಡುವೆ ಇಂದು ದೆಹಲಿ ಸಿಎಂ ನಿವಾಸದ ಮೇಲೆ ದಾಳಿ ಮಾಡಿದ್ದಂತ ಇಡಿ ಅಧಿಕಾರಿಗಳು ವಿಚಾರಣೆಯ ಬಳಿಕ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.
ಜಾರಿ ನಿರ್ದೇಶನಾಲಯ (ED) ತಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತಲುಪಿದ್ದರು. ಈ ಪ್ರಕರಣದಲ್ಲಿ ಅವರಿಗೆ ಸಮನ್ಸ್ ನೀಡಲು ತನಿಖಾ ಸಂಸ್ಥೆಯ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದರು. ಳಿಸಿವೆ. ಶೋಧ ವಾರಂಟ್ ಇದೆ ಎಂದು ತಂಡವು ಮುಖ್ಯಮಂತ್ರಿ ನಿವಾಸದ ಸಿಬ್ಬಂದಿಗೆ ಮಾಹಿತಿ ನೀಡಿತ್ತು.
ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ಈ ಹಿಂದೆ ಈ ಪ್ರಕರಣದಲ್ಲಿ ಏಜೆನ್ಸಿಯ ಅನೇಕ ಸಮನ್ಸ್ಗಳನ್ನು ತಪ್ಪಿಸಿಕೊಂಡಿದ್ದರು. ಇದಕ್ಕೂ ಮುನ್ನ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ಪೀಠವು ಕೇಜ್ರಿವಾಲ್ ಅವರಿಗೆ ಈ ಪ್ರಕರಣದಲ್ಲಿ ಬಲವಂತದ ಕ್ರಮದಿಂದ ಯಾವುದೇ ರಕ್ಷಣೆ ನೀಡಲು ನಿರಾಕರಿಸಿತು. ಸಮನ್ಸ್ ಪ್ರಶ್ನಿಸಿ ಎಎಪಿ ನಾಯಕನ ಮುಖ್ಯ ಅರ್ಜಿ ವಿಚಾರಣೆಗೆ ನಿಗದಿಯಾದಾಗ ಏಪ್ರಿಲ್ 22 ರಂದು ಹೆಚ್ಚಿನ ಪರಿಗಣನೆಗಾಗಿ ನ್ಯಾಯಪೀಠ ಅವರ ಅರ್ಜಿಯನ್ನು ಪಟ್ಟಿ ಮಾಡಿತು ಮತ್ತು ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿತು.
ಈ ನಡುವೆ ಇಂದು ಜಾರಿ ನಿರ್ದೇಶನಾಲದಯ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.