ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ದಳಪತಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಜೆಡಿಎಸ್ ಪಕ್ಷಕ್ಕೆ ಮಾಜಿ ಎಂಎಲ್ಸಿ ಮರಿತಿಬ್ಬೇಗೌಡ, ಎಂ.ಶ್ರೀನಿವಾಸ್ ಗುಡ್ ಬೈ ಹೇಳಿದ್ದಾರೆ. ಇಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.
ಈ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಜೆಡಿಎಸ್ ಮುಖಂಡರಾದಂತ ಮರಿತಿಬ್ಬೇಗೌಡ, ಎಂ.ಶ್ರೀನಿವಾಸ್ ಅವರು ಇಂದು ಬೆಳಿಗ್ಗೆ 12 ಗಂಟೆಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ ಎಂಬುದಾಗಿ ತಿಳಿಸಿದೆ.
ಅಂದಹಾಗೇ ಇಂದು ಜೆಡಿಎಸ್ ಪಕ್ಷಕ್ಕೆ ಹಾಗೂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ ಕೂಡ ಮಾಡಿದ್ದರು.
ಇನ್ನೂ ಇಂದು ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯ ನಂತ್ರ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.