ಬೆಂಗಳೂರು: ಮಕ್ಕಳ ಆರೈಕೆ ಕೇಂದ್ರಗಳನ್ನು ನಡೆಸುವ ಎಲ್ಲಾ ಖಾಸಗಿ ಸಂಸ್ಥೆಗಳು ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ಸೆಕ್ಷನ್ 41 ರ ಅಡಿಯಲ್ಲಿ ಏಪ್ರಿಲ್ 20 ರೊಳಗೆ ನೋಂದಾಯಿಸಿಕೊಳ್ಳಬೇಕು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಗಳವಾರ ಈ ನಿರ್ದೇಶನ ನೀಡಿದ್ದಾರೆ.
ಈ ನಿರ್ದೇಶನವು ಮಠಗಳು, ಮದರಸಾಗಳು ಮತ್ತು ಚರ್ಚುಗಳು ಸೇರಿದಂತೆ ಎಲ್ಲಾ ನೋಂದಾಯಿತ ಮತ್ತು ನೋಂದಾಯಿಸದ, ಹಳೆಯ ಮತ್ತು ಹೊಸ ಸಂಸ್ಥೆಗಳಿಗೂ ಅನ್ವಯಿಸುತ್ತದೆ.