ಯಾದಗಿರಿ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಾಟಕವಾಡಿದ್ದಂತ ಅನ್ಯ ಕೋಮಿನ ಯುವಕನೊಬ್ಬ, ಆಕೆಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಘಟನೆ ಸಂಬಂಧ 16 ಮಂದಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಅಪ್ರಾಪ್ತ ವಯಸ್ಕ ಹಿಂದೂ ಬಾಲಕಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಲ್ಲೆಗೊಳಗಾಗಿದ್ದ ಯುವಕ ವಾಹಿದ್ ಸೇರಿ 16 ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಾಹೀದ್ ಪ್ರೀತಿಯ ನಾಟಕದ ಮೂಲಕ ಬಾಲಕಿಯನ್ನು ಪುಸಲಾಯಿಸಿ ಮತಾಂತರಕ್ಕೆ ಯತ್ನಿಸಿದ್ದ. ಅಲ್ಲದೇ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಎಂಬುದಾಗಿ ಬಾಲಕಿ ಹಾಗೂ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ವಾಹೀದ್ ಸೇರಿ 16 ಜನರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.