ವಿಜಯಪುರ: ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬನನ್ನು ಜೀವಂತವಾಗಿ ಬೆಂಕಿ ಹಚ್ಚಿ, ಕೊಲ್ಲೋದಕ್ಕೆ ಯತ್ನಿಸಿದಂತ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ಕೂಡ ದಾಖಲಾಗಿದೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ದಲಿತ ದುಂಡಪ್ಪ(70) ಹಾಗೂ ಗ್ರಾಮದ ಕೆಲವರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿದೆ. ಈ ಸಂದರ್ಭದಲ್ಲಿ ದುಂಡಪ್ಪನನ್ನು ಕಬ್ಬಿನ ಬಣವೆಯ ಮೇಲೆ ಎತ್ತಿಹಾಕಿ, ಅದಕ್ಕೆ ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟು ಹಾಕೋದಕ್ಕೆ ಪ್ರಯತ್ನಿಸಲಾಗಿದೆ.
ಆದ್ರೇ ಈ ವೇಳೆಯಲ್ಲಿ ಜೀವ ಉಳಿಸಿಕೊಳ್ಳೋದಕ್ಕಾಗಿ ಅಲ್ಲಿಂದ ದುಂಡಪ್ಪ ತಪ್ಪಿಸಿಕೊಂಡು ಬಂದಿದ್ದಾರೆ. ಕಬ್ಬಿನ ಬಣವೆಗೆ ಬೆಂಕಿ ಹಚ್ಚಿದ್ದರಿಂದ ದುಂಡಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದುಂಡಪ್ಪ ನೀಡಿದಂತ ದೂರಿನ ಆಧಾರದ ಮೇಲೆ ಪೊಲೀಸರು ದಸ್ತಗಿರಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತಷ್ಟು ಜನರನ್ನು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.
ಅರವಿಂದ್ ಕೇಜ್ರಿವಾಲ್ ಕುಟುಂಬವನ್ನು ಗೃಹಬಂಧನದಲ್ಲಿರಿಸಲಾಗಿದೆ- ಎಎಪಿ ಗಂಭೀರ ಆರೋಪ
BREAKING: ಬಂಧನವನ್ನು ಪ್ರಶ್ನಿಸಿ ‘BSR ನಾಯಕಿ ಕವಿತಾ’ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ ಕೋರ್ಟ್’