ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಬಿಗ್ ಶಾಕ್ ನೀಡಲಾಗಿದೆ. ದಳಪತಿಗಳಿಗೆ ಶಾಕ್ ಮೇಲೆ ಶಾಕ್ ಎನ್ನುವಂತೆ JDS ಪಕ್ಷ ತೊರೆದು ಅಧಿಕೃತವಾಗಿ ಮರಿತಿಬ್ಬೇಗೌಡ, ಅಪ್ಪಾಜಿಗೌಡ, ಎಂ.ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು, ಮಾಜಿ ಪರಿಷತ್ ಸದಸ್ಯ ಅಪ್ಪಾಜಿಗೌಡ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನೀಡಿರುವಂತ ಮರಿತಿಬ್ಬೇಗೌಡ ಹಾಗೂ ಮಂಡ್ಯದ ಮಾಜಿ ಶಾಸಕ ಎಂ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಇತರೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು, ಪಕ್ಷದ ಶಾಲು ಧರಿಸಿ ಸೇರ್ಪಡೆಯಾದರು.
Shocking News: ವಿಜಯಪುರದಲ್ಲಿ ‘ದಲಿತ ವ್ಯಕ್ತಿ’ಯನ್ನು ಸಜೀವ ದಹನಕ್ಕೆ ಯತ್ನ