ಬೆಂಗಳೂರು: ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ನಟ ಶಿವರಾಜ್ ಕುಮಾರ್ ಅಭಿನಯದ ಚಿತ್ರಗಳು, ಜಾಹೀರಾತು ತಡೆಯುವಂತೆ ದೂರಿನಲ್ಲಿ ಮನವಿ ಮಾಡಿದೆ.
ನಟ ಶಿವರಾಜ್ ಕುಮಾರ್ ಅವರು ಪತ್ನಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಕಣದಲ್ಲಿ ಇದ್ದಾರೆ. ಅವರ ಪರವಾಗಿ ನಟ ಶಿವರಾಜ್ ಕುಮಾರ್ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಎಂಬುದಾಗಿ ತಿಳಿಸಲಾಗಿದೆ.
ಇನ್ನೂ ನಟ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಜೊತೆಗೆ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರೋ ಕಾರಣ, ಅವರ ಅಭಿನಯದ ಚಲನಚಿತ್ರ, ಜಾಹೀರಾತುಗಳಿಗೆ ತಡೆ ನೀಡುವಂತೆ ಚುನಾವಣಾ ಆಯೋಗಕ್ಕೆ ಕೋರಲಾಗಿದೆ.
ಇದೀಗ ಚುನಾವಣಾ ಆಯೋಗವು ನಟ ಶಿವರಾಜ್ ಕುಮಾರ್ ನಟನೆಯ ಚಲನಚಿತ್ರ, ಜಾಹೀರಾತುಗಳಿಗೆ ತಡೆ ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.