ಬೆಂಗಳೂರು: ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲೇ ಆಮಿಷದ ಆಫರ್ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕನಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಮಾಡುತ್ತಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ ಎಂದರು.
ಸಿಎಎ, ಪುಲ್ವಾಮಾ, ಅಯೋಧ್ಯೆ ಹೆಸರಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯರನ್ನು ಭಾವನಾತ್ಕವಾಗಿ ಮರಳು ಮಾಡ್ತೀರಿ? ಜನರ ಬದುಕಿನ ಸಮಸ್ಯೆಗಳಿಗೆ ನೆಪಕ್ಕೂ ಸ್ಪಂದಿಸದ ನೀವು ಕೇವಲ ಭಾವನಾತ್ಮಕವಾಗಿ ಕೆರಳಿಸುತ್ತಾ ಇದ್ದೀರಿ. ಆದರೆ ಭಾರತದ ಜನತೆ ನಿಮ್ಮನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು.
ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟದ ಆರೋಪಿಯ ಬಗ್ಗೆ ‘NIA’ಗೆ ಮಹತ್ವದ ಸುಳಿವು ಪತ್ತೆ
BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ ಅಸ್ವಸ್ಥ : ‘Bp’ ಲೋ, ಕೋರ್ಟ್’ನಿಂದ ಹೊರ ಕರೆತಂದ ಅಧಿಕಾರಿಗಳು