ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸೋನು ಗೌಡಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಎಂದು ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದುಕೊಂಡಿರುವ ಆರೋಪದ ಮೇಲೆ ಬಿಗ್ ಬಾಸ್ ಓ ಟಿ ಟಿ ಒಂದರ ಸ್ಪರ್ಧಿ ಸೋನು ಗೌಡ ಳನ್ನು ಇದೀಗ ಪೊಲೀಸರು ಬೆಂಗಳೂರಿನಲ್ಲಿರುವ ಸಿಜೆಮ್ ಹಾಲ್ ಗೆ ಹಾಜರುಪಡಿಸಿದ್ದರು. ಇದೀಗ ಸೋನಗೌಡಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡ್ ಗೆ ನೀಡಿ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ
ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಬಂಧಿಸಿದ್ದರು. ಇದೀಗ ವಿಚಾರಣೆಗಾಗಿ ಬೆಂಗಳೂರಿನ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು.ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್ ಸೋನು ಗೌಡ ವಿರುದ್ಧ ದೂರು ನೀಡಿದ್ದರು.
ಈ ದೂರನ್ನು ಆಧರಿಸಿ, ಸೋನು ಗೌಡ ವಿರುದ್ಧ ಜೆ.ಜೆ ಆ್ಯಕ್ಟ್ ಅಡಿಯಲ್ಲಿ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಆ ಬಳಿಕ ಇಂದು ಸೋನು ಗೌಡ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ. ಇದೀಗ ಪೊಲೀಸರು ಸೋನು ಗೌಡನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.