ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಫರ್ ಮಾಡಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನ ಮುಂದುವರೆಸಿದ್ದು, ನಮ್ಮಶಾಸಕರಿಗೆ 50 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ನಮ್ಮ ಶಾಸಕರಿಗೆ 50 ಕೋಟಿ ರೂ. ಆಫರ್ ನೀಡಲಾಗುತ್ತಿದೆ. ಉಚುನಾವಣೆಗೆ ಖರ್ಚು ನೀಡುತ್ತೇವೆ ಎಂದು ಆಮಿಷ ಒಡ್ಡುತ್ತಿದ್ದಾರೆ. ಈ ಮೂಲಕ ಬಿಜೆಪಿಯವರು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನೇ ನಾಶ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.