ಹುಬ್ಬಳ್ಳಿ: ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗೆ ಇಳಿಯಲಿದ್ದಾರೆ ಅಂಥ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಭವಿಷ್ಯ ನುಡಿದಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡುತ್ತ, ಕಾಂಗ್ರೆಸ್ ಪಕ್ಷದಲ್ಲಿ (Congress Party) ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿದ್ದರಾಮಯ್ಯಗೆ ಬೇರೆ ಯಾರಿಂದಲೂ ಸಮಸ್ಯೆಯಿಲ್ಲ, ಅವರ ಪಕ್ಷದವರಿಂದಲೇ ಸಮಸ್ಯೆ ಎಂದು ಹೇಳುತ್ತಿದ್ದಾರೆ ಅಂತ ತಿಳಿಸಿದರು. ಇನ್ನೂ ಹೆಚ್ಚಿನ ಡಿಸಿಎಂಗಳನ್ನು ಮಾಡಿ ಡಿ.ಕೆ.ಶಿವಕುಮಾರ್ ನನ್ನು ಮೂಲೆಗುಂಪು ಮಾಡುವ ತಂತ್ರ ನಡೆದಿದೆ ಎಂದು ಅವರು ಹೇಳಿದರು. ಇದಲ್ಲದೇ ಮಂಡ್ಯ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸುಮಲತಾ ಅವರ ಜೊತೆ ನಮ್ಮ ರಾಷ್ಟ್ರೀಯ ನಾಯಕರು ಮಾತನಾಡಿದ್ದಾರೆ. ಒಂದೆರಡು ದಿನಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಯುತ್ತೆ ಅಂತ ಹೇಳಿದರು. ಶೆಟ್ಟರ್ ಟಿಕೆಟ್ ಇನ್ನೂ ಅಂತಿಮಗೊಳ್ಳದ ವಿಚಾರವಾಗಿ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಇನ್ನೂ ಬೆಳಗಾವಿ ಟಿಕೆಟ್ ಅಂತಿಮವಾಗಿಲ್ಲ ಅಂತ ಹೇಳಿದರು.