ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಐವರು ಕಾರ್ಯಾಧ್ಯಕ್ಷರ ನೇಮಕ ಮಾಡಿ ಆದೇಶವನ್ನು ಹೊರಡಿಸಿದೆ. ಕಾಂಗ್ರೆಸ್ ಪ್ರಚಾರ ಸಮಿತಿಯನ್ನು ರಚನೆ ಮಾಡಲಾಗಿದ್ದು, ಮೂವರು ನಾಯಕರಿಗೆ ಅಧ್ಯಕ್ಷ ಸ್ಥಾನ.
ಶಾಸಕರಾದ ತನ್ವೀರ್ ಸೇಠ್, ವಿನಯ್ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಹಾಗೂ ವಸಂತ್ ಕುಮಾರ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಇದಲ್ಲದೇ ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿನಯ್ ಕುಮಾರ್ ಸೊರಕೆ ಅವರನ್ನು ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅವರ ಜೊತೆಗೆ ಡಾ. ಎಲ್ ಹನುಮಂತಯ್ಯ ಅವರನ್ನು ಸಹ -ಅಧ್ಯಕ್ಷ ಹಾಗೂ ರಿಜ್ವಾನ್ ಹರ್ಷದ್ ಅವರನ್ನು ಪ್ರಚಾರ ಸಮಿತಿ ಉಪ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.