ನವದೆಹಲಿ : ಕೆಪಿಸಿಸಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ. ಲೋಕಸಭಾ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಿಸಲಾಗಿದೆ.
ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ (ಮೈಸೂರು) ವಿಭಾಗ, ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ (ಬೆಳಗಾವಿ ವಿಭಾಗ), ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ (ಆಡಳಿತ ಹಾಗೂ ಬೆಂಗಳೂರು ವಿಭಾಗ), ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ (ಕರಾವಳಿ) ಹಾಗೂ ರಾಯಚೂರು ಜಿಲ್ಲಾ ಕಾಂಗ್ರೆಸ್ ಮುಖಂಡ ವಸಂತಕುಮಾರ್ (ಕಲ್ಯಾಣ ಕರ್ನಾಟಕ) ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.