ಬೆಂಗಳೂರು ; ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚೇತರಿಸಿಕೊಂಡಿದ್ದು, ಇಂದು ಚೆನ್ನೈನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯಾಗಿದೆ. ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಮತ್ತು ಅಮೆರಿಕದಿಂದ ಆಗಮಿಸಿದ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಇಂದು ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಬೆಳಗ್ಗೆ 7.30 ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ.