ಹುಬ್ಬಳ್ಳಿ : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ನಾವು ಏನೂ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂಬುದಕ್ಕೆ ಗುಪ್ಪಿ ಶಾಸಕರ ಬಹಿರಂಗ ಹೇಳಿಕೆಯೇ ಸಾಕ್ಷಿ, ಗುಂಪುಗಾರಿಕೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದರು.