ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತು ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಎರಡು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿ ದೂರು ನೀಡಿದೆ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ೫೦ ಕೋಟಿ ರೂ. ಆಫರ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಕೋಟಾ ಶ್ರೀನಿವಾಸ ಪೂಜಾರಿಗೆ ಹಿಂದಿ ಬರಲ್ಲ ಎಂಬ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಸುರೇಶ್ ಕುಮಾರ್ ನೇತೃತ್ವದ ನಿಯೋಗ ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.