ಮೈಸೂರು: ನಾನು ರೈಲು ಬಿಡೋರನ್ನು ನೋಡಿದ್ದೀನಿ. ಆದರೆ ಯಪ್ಪಾ ಯಪ್ಪಾ ಮೋದಿಯವರಷ್ಟು, ಬಿಜೆಪಿಯವರಷ್ಟು ರೈಲು ಬಿಡೋರನ್ನು ನೋಡೇ ಇಲ್ಲ ಎಂಬುದಾಗಿ ಸಿ.ಎಂ.ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದೆ ಎಂದರು.
ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ ಎಂದರು.
ಹೀಗಾಗಿ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ , ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದು ಟೀಕಿಸಿದರು.
ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ ಎಂದರು.
ಶ್ರೀರಾಮಚಂದ್ರ, ಸೀತಾ , ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ. ನನ್ನ ಹೆಸರಿನಲ್ಲೇ ರಾಮ ಇದೆ ಎಂದರು.
ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಮತ್ತು ನರೇಂದ್ರ ಮೋದಿ ಹೇಳಿದ್ದರಲ್ಲಿ ಒಂದನ್ನೂ ಮಾಡಿಲ್ಲ ಎಂದು ಅವರ ವಿಫಲ ಅಶ್ವಾಸನೆಗಳ ಪಟ್ಟಿಯನ್ನೇ ನೀಡಿದರು.
‘ಸೋನುಗೌಡ’ ಕಾನೂನು ಬಾಹಿರವಾಗಿ ‘ಮಗು ದತ್ತು’ ಪ್ರಕರಣ: ಪೊರೀಸರಿಂದ ‘ಸ್ಥಳ ಮಹಜರು’
‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’