ಮೈಸೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರಿದೆ. ತನ್ನ ತವರು ಕ್ಷೇತ್ರದಲ್ಲಿನ ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ಧರಾಮಯ್ಯ ಅವರು ನೇರವಾಗೇ ಕಣಕ್ಕೆ ಇಳಿದಿದ್ದಾರೆ.
ಇಂದಿನಿಂದ ನಾಲ್ಕು ದಿನಗಳ ಕಾಲ ಮೈಸೂರಲ್ಲೇ ವಾಸ್ತವ್ಯ ಹೂಡಲಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ ಕಣದಲ್ಲಿರುವಂತ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸಲಿದ್ದಾರೆ.
ಮೈಸೂರಿನಲ್ಲಿ ಸರಣಿ ಸಭೆಯನ್ನು ನಡೆಸುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ ತವರು ಕ್ಷೇತ್ರದಲ್ಲೇ ಅಭ್ಯರ್ಥಿಗಳ ಗೆಲುವಿಗೆ ರಾಜಕೀಯ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ.
ಶಾಸಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡುತ್ತಿರುವಂತ ಅವರು, ಗೊಂದಲ ಅಸಮಾಧಾನವಿದ್ದರೇ, ಆ ನಾಯಕರನ್ನು ಕರೆದು ಮಾತನಾಡುವ ಕೆಲಸ ಮಾಡುತ್ತಿದ್ದಾರೆ.